ಮೈಸೂರು

ಕೆಜಿಎಫ್ ಬಾಬು ಬೀಗರ ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ

ಮೈಸೂರು,ಮೇ.28:-  ಬೆಳ್ಳಂಬೆಳಿಗ್ಗೆ ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಅವರ ಮೈಸೂರಿನಲ್ಲಿರುವ ಬೀಗರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು   ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬನ್ನಿಮಂಟಪ ಎ ಬಡಾವಣೆಯ 808ಸೋಪ್ ಫ್ಯಾಕ್ಟರಿ ರಸ್ತೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 17ರ ಸದಸ್ಯೆ ರೇಷ್ಮಾಬಾನು ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಲಭವಾಗಬೇಕಿದೆ.(ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: