
ಮೈಸೂರು
ಎಸ್ ಎಸ್ ಎಲ್ ಸಿಯಲ್ಲಿ ಕಡಿಮೆ ಅಂಕ : ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಮೈಸೂರು,ಮೇ.28:- ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ದೀಪಿಕ(17) ಎಂದು ಹೇಳಲಾಗಿದೆ. ಈ ಬಾರಿ ಎಸ್.ಎಸ್.ಎಲ್.ಸಿ.ಪರೀಕ್ಷೆ ಫಲಿತಾಂಶದಲ್ಲಿ ದೀಪಿಕಾ 625 ಕ್ಕೆ 509 ಅಂಕ ಪಡೆದಿದ್ದಳು. 580 ಕ್ಕೂ ಹೆಚ್ಚು ಅಂಕ ಪಡೆಯುವ ನಿರೀಕ್ಷೆಯಲ್ಲಿದ್ದ ದೀಪಿಕಾ ಗೆ ನಿರಾಸೆಯಾಗಿತ್ತು. ಇದರಿಂದ ಮನನೊಂದ ದೀಪಿಕಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)