ಕರ್ನಾಟಕಪ್ರಮುಖ ಸುದ್ದಿ

ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕಬೇಕು ; ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

ರಾಜ್ಯ(ಮಂಗಳೂರು),ಮೇ.28 : ಮಸೀದಿಗಳ ಮೇಲೆ ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕಬೇಕು ಎಂದು ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಮಳಲಿ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಮಾತನಾಡಿ, ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟುಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ ಎಂದು ಹೇಳಿದ್ದಾರೆ.

ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ‘ಪೂಜಾ ಸ್ಥಳ ಕಾಯ್ದೆ 1991’ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆಕ್ಟ್ ಅನ್ನು ಪೊಲೀಸರು ಓದಿಲ್ವೇ?. 2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ. ಸಂಘಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ. ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆಗೆ ಮಾರ್ಚ್ ಮಾಡಲಿ ಎಂದು ಸವಾಲೆಸೆದಿದ್ದಾರೆ.(ಎಸ್.ಎಂ)

Leave a Reply

comments

Related Articles

error: