ಕರ್ನಾಟಕಪ್ರಮುಖ ಸುದ್ದಿಮೈಸೂರು

ಮನ್ ಕಿ ಬಾತ್ ವೀಕ್ಷಿಸಿದ ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು ,ಮೇ.29:- ಕಳೆದ ಎಂಟು ವರ್ಷಗಳಿಂದ ದೇಶದ ಆಡಳಿತವನ್ನು ನಡೆಸುತ್ತಿರುವ ದೇಶದ  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರತಿ ತಿಂಗಳು ನಾಲ್ಕನೆ ಭಾನುವಾರ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುವ ಮನದಾಳದ ಮಾತು ಮನ್ ಕೀ ಬಾತ್ ಕಾರ್ಯಕ್ರಮ ವನ್ನು  ರಾಜ್ಯ ಸರ್ಕಾರದ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಕೆ.ಆರ್.ನಗರದಲ್ಲಿ ವೀಕ್ಷಿಸಿದರು.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಪ್ರಚಾರ ನಿಮಿತ್ತ ಕೆ ಆರ್ ನಗರ ತಾಲ್ಲೂಕಿನಲ್ಲಿ ಮತದರಾರರ ಭೇಟಿ ಹಾಗೂ ಸಭೆಯನ್ನು ನಡೆಸಿ ಆ ಸಂದರ್ಭದಲ್ಲಿ ತಾಲ್ಲೂಕಿನ ಮುಖಂಡರಾದ ಗೋಪಾಲ್ ಅವರ ಮನೆಯಲ್ಲಿ ಪ್ರಧಾನಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಕಾರ್ಯಕರ್ತರ ಜೊತೆಗೆ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ  ಮಂಗಳಾ ಸೋಮಶೇಖರ್, ಜಿಲ್ಲಾ ವಕ್ತಾರ ಶ್ರೀನಿವಾಸ್ ಗೌಡ ,ಜಿಲ್ಲಾ ಸಹ ವಕ್ತಾರ ಡಾ.ಕೆ ವಸಂತ ಕುಮಾರ್, ಮಂಡಲ ಅಧ್ಯಕ್ಷರಾದ ಮಂಜುನಾಥ್, ಮುಂಖಡರಾದ ಗೋಪಾಲ್, ಪ್ರಧಾನ ಕಾರ್ಯದರ್ಶಿ ಗಳಾದ ಮಾರ್ಕಂಡಯ್ಯ ,ಗೋಪಾಲ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: