ಸುದ್ದಿ ಸಂಕ್ಷಿಪ್ತ

ರಾಜ್ಯಮಟ್ಟದ ವಿಚಾರ ಸಂಕಿರಣ ಮೇ.16ಕ್ಕೆ

ಮೈಸೂರು.ಮೇ.15 : ‘ಆಧುನಿಕ ಭಾರತದ ಚರಿತ್ರೆ- ಬಾಬು ಜಗಜೀವನರಾಮ್ ಹಾಗೂ ಅವರ ವಿಚಾರಧಾರೆಗಳ ಪ್ರಭಾವ’ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಮೇ.16ರ ಬೆಳಿಗ್ಗೆ 10.30ಕ್ಕೆ ಮಹಾರಾಣಿ ಕಾಲೇಜಿನ ಜಯಲಕ್ಷ್ಮಮ್ಮಣ್ಣಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಮೈಸೂರು ವಿವಿಯ ಕುಲಸಚಿವ ಪ್ರೊ.ರಾಜಣ್ಣ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಸದಸ್ಯ ಪ್ರೊ.ಡಿ.ನಂಜುಂಡಯ್ಯ, ಮಹಾರಾಣಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಟಿ.ವಿಜಯ್ ಅಧ್ಯಕ್ಷತೆ ವಹಿಸುವರು. ಪ್ರೊ.ಕೆ.ಸದಾಶಿವ ಹಾಗೂ ಕಾಲೇಜಿನ ಸ್ನಾತಕೋತ್ತರ ಇತಿಹಾಸ ವಿಭಾಗದ ಡಾ.ಎಂ.ಎಸ್.ಅನಿತಾ ಭಾಗವಹಿಸುವರು.

ವಿಚಾರ ಸಂಕಿರಣವನ್ನು ಮೈಸೂರು ವಿವಿಯ ಡಾ.ಬಾಬೂ ಜಗಜೀವನರಾಮ್ ಅಧ್ಯಯನ, ಸಂಶೋಧನ ಮತ್ತು ವಿಸ್ತರಣ ಕೇಂದ್ರ, ಮಹಾರಾಣಿ ಕಾಲೇಜಿನ ಸ್ನಾತಕೋತ್ತರ ಇತಿಹಾಸ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: