ಸುದ್ದಿ ಸಂಕ್ಷಿಪ್ತ

ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮೇ.16ಕ್ಕೆ

ಮೈಸೂರು.ಮೇ.15 : ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ.16ರ ಬೆಳಿಗ್ಗೆ 10.30ಕ್ಕೆ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಡಗನಾಡು ಹೇಮರೆಡ್ಡಿ ಮಲ್ಲಮ್ಮ ಬಳಗ ಹಾಗೂ ಇತರೆ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಜಯಂತಿಗೆ ಚಾಲನೆ ನೀಡುವರು. ಶಾಸಕ ವಾಸು ಅಧ್ಯಕ್ಷತೆ ವಹಿಸುವರು. ಗಾವಡಗೆರೆ ಓಂಶ್ರೀ ಗುರುಲಿಂಗಜಂಗಮ ದೇವರಮಠ ನಟರಾಜ ಸ್ವಾಮೀಜಿಗಳು ಸಾನಿಧ್ಯ ವಹಿಸುವರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಸಚಿವ ತನ್ವೀರ್ ಸೇಠ್, ಮಹಾಪೌರ ಎಂ.ಜೆ.ರವಿಕುಮಾರ್ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿ.ಪಂ.ಅಧ್ಯಕ್ಷೆ ನಯಿಮಾಸುಲ್ತಾನ್, ಸಂಸದರಾದ ಪ್ರತಾಪ್ ಸಿಂಹ, ಆರ್.ದ್ರುವನಾರಾಯಣ್, ಸಿ.ಎಸ್.ಪುಟ್ಟರಾಜು ಪಾಲ್ಗೊಳ್ಳುವರು. ಶಾಸಕರಾದ ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಕೆ.ವೆಂಕಟೇಶ್, ಜಿ.ಟಿ.ದೇವೇಗೌಡ, ಎಸ್.ಚಿಕ್ಕಮಾದು, ಸಾ.ರಾ.ಮಹೇಶ್, ಕಳಲೆ ಕೇಶವಮೂರ್ತಿ ಹಾಗೂ ಇನ್ನಿತರ ಗಣ್ಯರು ಸಮಾರಂಭದಲ್ಲಿ ಭಾಗಿಯಾಗುವರು. ಬೆಳಿಗ್ಗೆ 10 ರಿಂದ ಮೈಸೂರಿನ ಸುಮಂಗಲ ಜಂಗಮಶೆಟ್ಟಿಯವರಿಂದ ವಚನ ಗಾಯನವಿದೆ.

Leave a Reply

comments

Related Articles

error: