ದೇಶಪ್ರಮುಖ ಸುದ್ದಿ

ದೇಶದಲ್ಲಿ ವೇಗ ಪಡೆದುಕೊಂಡ ಕೊರೋನಾ : 83 ಸಾವಿರ ದಾಟಿದ ಸಕ್ರಿಯ ಪ್ರಕರಣ; ಕಳೆದ 24 ಗಂಟೆಗಳಲ್ಲಿ 13,313 ಪ್ರಕರಣ ಪತ್ತೆ

ದೇಶ(ನವದೆಹಲಿ),ಜೂ.23:- ಭಾರತದಲ್ಲಿ ಕೊರೊನಾ ಮಹಾಮಾರಿ ಮತ್ತೊಮ್ಮೆ ವೇಗ ಪಡೆದುಕೊಂಡಿದೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ವರದಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 13,313 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, 10,972 ಜನರು ಈ ಕಾಯಿಲೆಯಿಂದ ಗುಣಮುಖರಾಗಿದ್ದಾರೆ.

ಅದೇ ವೇಳೆ 38 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳು 83 ಸಾವಿರಕ್ಕೂ ಹೆಚ್ಚಿವೆ (83,990 ಪ್ರಕರಣಗಳು),. ಈ ಹಿಂದೆ ಅಂದರೆ ಜೂನ್ 22 ರಂದು ದೇಶಾದ್ಯಂತ 12249 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದವು. 13 ಜನರು ಸಾವನ್ನಪ್ಪಿದ್ದರು.
ಮತ್ತೊಂದೆಡೆ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಗಮನಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸುವ ಕುರಿತು ಚರ್ಚಿಸಲಾಗುತ್ತದೆ. ಮೂಲಗಳ ಪ್ರಕಾರ ವೈದ್ಯಕೀಯ ತಜ್ಞರು ಕೂಡ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ.
ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳ ವರದಿಯನ್ನು ಗಮನಿಸಿದರೆ ಸೋಂಕಿನ ವೇಗದಲ್ಲಿ ಹೆಚ್ಚಳ ಕಂಡುಬಂದಿದೆ. ಅನೇಕ ತಜ್ಞರು ಇದನ್ನು ನಾಲ್ಕನೇ ತರಂಗ ಎಂದೂ ಕರೆಯುತ್ತಾರೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ವರದಿಯಲ್ಲಿ ಮಂಗಳವಾರ ಸೋಂಕಿತರಲ್ಲಿ ಇಳಿಕೆ ಕಂಡುಬಂದಿದೆ. ಆದಾಗ್ಯೂ, ಬುಧವಾರ ಮತ್ತೊಮ್ಮೆ ಉಲ್ಬಣವು ಕಂಡುಬಂದಿದೆ. ಒಟ್ಟು 12,249 ಹೊಸ ಪ್ರಕರಣಗಳು ದಾಖಲಾಗಿವೆ. ಅದೇ ವೇಳೆ 13 ಜನರು ಸಹ ಸಾವನ್ನಪ್ಪಿದ್ದರು. ಅದೇ ಸಮಯದಲ್ಲಿ ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ ದೇಶಾದ್ಯಂತ 5,24,941 ಕ್ಕೆ ಏರಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: