ಕರ್ನಾಟಕಪ್ರಮುಖ ಸುದ್ದಿ

ಕೇಂದ್ರ ಸಾಹಿತ್ಯ ಅನುವಾದ ಪುಸ್ತಕ ಪ್ರಶಸ್ತಿಗೆ ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಭಾಜನ

ರಾಜ್ಯ(ಬೆಂಗಳೂರು),ಜೂ.24 : ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಹಿರಿಯ ಲೇಖಕರಾದ ಡಾ.ಗುರುಲಿಂಗ ಕಾಪಸೆ ಅವರು ಭಾಜನರಾಗಿದ್ದಾರೆ.

ಡಾ.ಗುರುಲಿಂಗ ಕಾಪಸೆ ಅವರು ಮರಾಠಿ ಯಿಂದ ಕನ್ನಡಕ್ಕೆ ಅನುವಾದಿಸಿದ ವಿ.ಸ.ಖಾಂಡೇಕರ್ ಅವರ ‘ಒಂದು ಪುಟದ ಕಥೆ’ ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುದಾವ ಪ್ರಶಸ್ತಿಗೆ ಆಯ್ಕೆಯಾಗಿದೆ. ‘ಒಂದು ಪುಟದ ಕಥೆ’ ಯು ಖಾಂಡೇಕರ್ ಅವರ ಆತ್ಮಕಥೆಯಾಗಿದೆ. ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ ‘ಯಯಾತಿ’ ಎಂಬ ಕೃತಿಗೆ ಜ್ಞಾನಪೀಠ ಪ್ರಶಸ್ತಿಯು ಬಂದಿತ್ತು.

ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನಾರದ ಡಾ.ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ.ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.(ಎಸ್.ಎಂ)

Leave a Reply

comments

Related Articles

error: