
ಕರ್ನಾಟಕಪ್ರಮುಖ ಸುದ್ದಿ
ಶಾಲಾ ವಿದ್ಯಾರ್ಥಿಯ ಬರ್ಬರ ಹತ್ಯೆ
ರಾಜ್ಯ, (ಮಂಡ್ಯ) ಮೇ 16: ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯ ಸರ್ಕಾರಿ ನೌಕರರ ಕಾಲೋನಿಯ ಬಳಿ ನಿರ್ಜನ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ತೇಗನಹಳ್ಳಿಯ ಆಶೀರ್ವಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್ ಕಗ್ಗೊಲೆಯಾದ ಬಾಲಕ.
ಕೆ.ಆರ್.ಪೇಟೆ ತಾಲೂಕಿನ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಜಾತ ಅವರ ಪುತ್ರ ಎಂದು ತಿಳಿದು ಬಂದಿದೆ.
ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. -(ವರದಿ: ಕೆ.ಎಸ್, ಎಲ್.ಜಿ)