ಮೈಸೂರು

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಮಂಡ್ಯ, ಮೇ 16 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಮೆಟ್ರಿಕ್ ಪೂರ್ವ ಬಾಲಕರ  ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ/ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಗಳನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ನಿಲಯ ಮೇಲ್ವಿಚಾರಕರಿಂದ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15. ಹೆಚ್ಚಿನ ವಿವರಗಳಿಗೆ  ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಆಥವಾ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಮಳವಳ್ಳಿ  ಇವರನ್ನು ಸಂಪರ್ಕಿಸಲು ಕೋರಿದೆ.

-ಎನ್.ಬಿ.ಎನ್.

Leave a Reply

comments

Related Articles

error: