ಸುದ್ದಿ ಸಂಕ್ಷಿಪ್ತ

ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನ ಮೇ.17

ಮೈಸೂರು.ಮೇ 16 : ಚೈಲ್ಡ್ ಲೈನ್ ಮೈಸೂರು 1098ಇವರಿಂದ ಆಯೋಜಿಸಿರುವ  ‘ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನ’ವೂ   ಮೇ.17ರಂದು, ಬೆಳಿಗ್ಗೆ 9.30ಕ್ಕೆ ಗಾಂಧಿ ವೃತ್ತದಲ್ಲಿ ವಿದ್ಯುಕ್ತವಾಗಿ ಚಾಲನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ  ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಹಮ್ಮದ್ ಮುಜಿರುಲ್ಲಾ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧ, ಮಕ್ಕಳ ಸಂರಕ್ಷಣಾಧಿಕಾರಿ ನಾಗರಾಜು, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ನಿರ್ದೇಶಕಿ ಸರಸ್ವತಿ ಹಾಗೂ ಇತರರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಮೈಸೂರಿನಾದ್ಯಂತ ಧ್ವನಿ ವರ್ಧಕ ಹಾಗೂ ಬೀದಿ ನಾಟಕದ ಮೂಲಕ ಮಕ್ಕಳ ಸುರಕ್ಷತೆ ಹಾಗೂ ರಕ್ಷಣ ಪೋಷಣೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ವಿವಿಧ ಕೊಳಚೆ ಪ್ರದೇಶಗಳಿಂದ 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: