ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಮೇ, 16:-ಪ್ರಸಕ್ತ(2017-18) ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ, ವಸತಿ ಶಾಲೆಗೆ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯ, ಆಶ್ರಮ ಶಾಲೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿ, ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಜೂನ್, 15 ರೊಳಗೆ ಸಂಬಂಧಿಸಿದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಿಗೆ, ಆಶ್ರಮ ಶಾಲಾ ಮುಖ್ಯಶಿಕ್ಷಕರುಗಳಿಗೆ ಅಥವಾ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ-08272-223552 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

 

Leave a Reply

comments

Related Articles

error: