ಸುದ್ದಿ ಸಂಕ್ಷಿಪ್ತ

ಮೇ 19 : ಕುಂದುಕೊರತೆ ಸಭೆ

ಮಡಿಕೇರಿ.ಮೇ16:- ವಿರಾಜಪೇಟೆ ತಾಲೂಕು ವ್ಯಾಪ್ತಿಯ ಗೋಣಿಕೊಪ್ಪ ಮತ್ತು ವಿರಾಜಪೇಟೆ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಮೇ, 19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಗೋಣಿಕೊಪ್ಪಲು  ಉಪ ವಿಭಾಗ ಕಚೇರಿ ಆವರಣದಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಯಿಂದ  ಸಂಜೆ 5 ಗಂಟೆವರೆಗೆ ವಿರಾಜಪೇಟೆ  ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ  ವಿದ್ಯುಚ್ಛಕ್ತಿಗೆ ಸಂಬಂಧಿಸಿದ  ಸಮಸ್ಯೆ  ಅಥವಾ ದೂರುಗಳು ಇದ್ದಲ್ಲಿ  ಈ ಸಭೆಯಲ್ಲಿ ಚರ್ಚಿಸಿ  ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ

Leave a Reply

comments

Related Articles

error: