ಕರ್ನಾಟಕಪ್ರಮುಖ ಸುದ್ದಿಮೈಸೂರು

ದಸರಾ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅಡ್ಡಿಯಾಗದಂತೆ ಸೂಚನೆ: ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು/ಮೈಸೂರು, ಜು. 19:- ದಸರಾ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅಡ್ಡಿಯಾಗದಂತೆ ಮೈಸೂರು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ರ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದಸರಾ ನೆಪದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ ಎಂದು ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು ಎಂದು ಸಚಿವರು ತಿಳಿಸಿದರು.

ಅರಮನೆ ಆವರಣದೊಳಗೆ ನಡೆಯುವ ಕಾರ್ಯಕ್ರಮಗಳ ವೆಚ್ಚವನ್ನು ಅರಮನೆ ಆಡಳಿತ ಮಂಡಳಿ ಭರಿಸುವಂತೆ, ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುದರ ಕುರಿತು ಎಲ್ಲರ ಅಭಿಪ್ರಾಯ ಪಡೆದು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲೆಯ ಸಂಸದರು, ಎಲ್ಲಾ ಶಾಸಕರು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: