ಸುದ್ದಿ ಸಂಕ್ಷಿಪ್ತ

ಬುದ್ದ, ಬಸವ ಹಾಗೂ ಅಂಬೇಡ್ಕರ್ ಜಯಂತಿ ಮೇ.18ಕ್ಕೆ

ಮೈಸೂರು.ಮೇ.17 : ಮೈಸೂರು ವಿವಿಯ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಬುದ್ಧ, ಬಸವ, ಮತ್ತು ಅಂಬೇಡ್ಕರ ಜಯಂತಿಯನ್ನು ಮೇ.18ರ ಬೆಳಿಗ್ಗೆ 11ಕ್ಕೆ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಾಜಿ ಸಚಿವ, ಶಾಸಕ ನರೇಂದ್ರ ಸ್ವಾಮಿ ಉದ್ಘಾಟಿಸುವರು, ಶಾಸಕ ಎಂ.ಕೆ.ಸೋಮಶೇಖರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು, ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ ಅಧ್ಯಕ್ಷತೆ ವಹಿಸುವರು. ಮುಖ್ಯ ಭಾಷಣಕಾರರಾಗಿ ಗಾಂಧಿ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಶಿವರಾಜಪ್ಪ ಮತ್ತು ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಪ್ರೊ.ಬಿ.ಪಿ.ಮಹೇಶ್ ಚಂದ್ರ ಗುರು ಆಗಮಿಸುವರು. ಮುಖ್ಯ ಅತಿಥಿಗಳಾಗಿ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ಧರಾಮಯ್ಯ ಹಾಗೂ ಸುನೀಲ್ ಬೋಸ್ ಆಗಮಿಸುವರು. (ಕೆ.ಎಂ.ಆರ್)

Leave a Reply

comments

Related Articles

error: