ಮೈಸೂರು

ಜಾನಪದ ಕಲೆಗೆ ತಂತ್ರಜ್ಞಾನದ ಸ್ಪರ್ಶ ನೀಡಬೇಕಿದೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಮೇ ೧೭: ಇಂದು ಎಲ್ಲವೂ ತಂತ್ರಜ್ಞಾನಮಯವಾಗಿದ್ದು ಜಾನಪದ ಕಲೆಗಳಿಗೂ ತಂತ್ರಜ್ಞಾನದ ಸ್ಪರ್ಶ ನೀಡಿದರೆ ನಮ್ಮ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬಹುದು ಎಂದು ವರುಣ ಕ್ಷೇತ್ರದ ವಸತಿ ಯೋಜನೆಗಳ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಬುಧವಾರ ನಗರದ ಕನ್ನಡ ಜಾನಪದ ಪರಿಷತ್ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಗೋಗದಲ್ಲಿ ಆಯೋಜಿಸಿದ್ದ ವರುಣ ಕ್ಷೇತ್ರ ಜಾನಪದ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆ ಭರಾಟೆಗೆ ಸಿಲುಕಿ ನಲುಗುತ್ತಿರುವ ನಮ್ಮ ಪಾರಂಪರಿಕ ಕಲೆ ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಇದು ಸಾಧ್ಯವಾಗಬೇಕಾದರೆ ಜಾನಪದ ಕಲೆಗಳಿಗೆ ಜಾಗತಿಕ ಮಾರುಕಟ್ಟೆ ಒದಗಿಸಬೇಕಿದೆ. ತಂತ್ರಜ್ಞಾನದೊಂದಿಗೆ ಜಾನಪದ ಕಲೆಗಳನ್ನು ಅಭಿವೃದ್ಧಿಪಡಿಸಿ ಮಾರುಕಟ್ಟೆ ಒದಗಿಸಿದರೆ ಯುವ ಪೀಳಿಗೆಗೆ ಜಾನಪದ ಕ್ಷೇತ್ರದಲ್ಲಿ ಉದ್ಯೋಗಾವಕಾಶ ದೊರೆಯುವುದಲ್ಲದೆ ಕಲೆಯೂ ಬೆಳೆಯುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಂಗಾಯಣ ಮಾಜಿ ನಿರ್ದೇಶಕ ಜರ್ನಾಧನ್, ಡಾ.ಎಸ್.ಬಾಲಾಜಿ, ಮೈಸೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಎಚ್.ಕ್ಯಾತನಹಳ್ಳಿ ಪ್ರಕಾಶ್, ಬೆಂಗಳೂರಿನ ಕನ್ನಡ ಜಾನಪದ ಪರಿಷತ್ ಸಂಚಾಲಕ ಡಾ.ಕನಕತಾರ, ವರುಣಕ್ಷೇತ್ರದ ಜಾನಪದ ಪರಿಷತ್ ಗೌರವಾಧ್ಯಕ್ಷ ಕೆ.ಸಿ.ಬಲರಾಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: