ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ. ಅದಕ್ಕೆ ಸಿಎಂ ಬದಲಾವಣೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ; ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯ(ಬೆಂಗಳೂರು),ಆ.10 : ಕಾಂಗ್ರೆಸ್ನವರಿಗೆ ತಲೆ ಕೆಟ್ಟಿದೆ. ಅದಕ್ಕೆ ಸಿಎಂ ಬದಲಾವಣೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿಯ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಅಧಿಕಾರ ಅವರಿಗೆ ಯಾರು ಕೊಟ್ಟಿರುವುದು. ಬೊಮ್ಮಾಯಿ ಆಡಳಿತ ನೋಡಿ ಕಾಂಗ್ರೆಸ್ನವರಿಗೆ ತಲೆ ಕೆಟ್ಟಿದೆ. ಬೊಮ್ಮಾಯಿ ಅವರ ಅಭಿವೃದ್ಧಿ ಕೆಲಸ ನೋಡಿ ಕಾಂಗ್ರೆಸ್ಗೆ ಭಯ ಆಗುತ್ತಿದೆ. ಹೀಗಾಗಿ ಕಾಂಗ್ರೆಸ್ನವರು ಹೀಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರ ಹೇಳಿಕೆ ಮತ್ತು ಟ್ವೀಟ್ ಮೂರ್ಖತನದ್ದು. ಬಿಜೆಪಿ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ಅವರು ಹೇಗೆ ಬದಲಾವಣೆ ಮಾಡ್ತಾರೆ. ಅವರಿಗೆ ಭಯ ಬಂದಿದೆ. ಬೊಮ್ಮಾಯಿ ಅಭಿವೃದ್ಧಿ ಕೆಲಸ ಅವರಿಗೆ ನಡುಕ ಹುಟ್ಟಿಸಿದೆ. ಸುಳ್ಳು ಹೇಳಿ ಇಮೇಜ್ ಜಾಸ್ತಿ ಮಾಡಿಕೊಳ್ಳಲು ಕಾಂಗ್ರೆಸ್ನವರು ಪ್ರಯತ್ನಿಸುತ್ತಿದ್ದಾರೆ. ಜನ ಕಾಂಗ್ರೆಸ್ನವರ ಮಾತು ಕೇಳಿ ನಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.(ಎಸ್.ಎಂ)

Leave a Reply

comments

Related Articles

error: