ಕರ್ನಾಟಕಪ್ರಮುಖ ಸುದ್ದಿಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಅಂಕಿತಾ

ರಾಜ್ಯ(ಬೆಂಗಳೂರು),ಆ.10 : ಕಿರುತೆರೆಯ ಜನಪ್ರಿಯ ಸೀರಿಯಲ್ `ಕಮಲಿಖ್ಯಾತಿ ನಿಂಗಿ ಅಲಿಯಾಸ್ ಅಂಕಿತಾ ಅವರು ಸುಹಾಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

`ಕಮಲಿಧಾರಾವಾಹಿ ಮೂಲಕ ಮನೆಮಾತಾದ ನಟಿ ಅಂಕಿತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಗುರು ಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ. ನಟಿಯ ಮದುವೆಗೆ ಕಮಲಿ ಧಾರಾವಾಹಿ ತಂಡ ಕೂಡ ಕಾಣಿಸಿಕೊಂಡು, ನವಜೋಡಿಗೆ ಶುಭ ಹಾರೈಸಿದ್ದಾರೆ.

ವರ್ಷಗಳ ಹಿಂದೆಯೇ ಅಂಕಿತಾ ಹಾಗೂ ಸುಹಾಸ್ ಎನ್ನುವವರ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥ ಆಗಿ ಸರಿಯಾಗಿ ಒಂದು ವರ್ಷ ಆದನಂತರದಲ್ಲಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆನಡಾದಲ್ಲಿ ಸುಹಾಸ್ ನೆಲೆಸಿದ್ದು, ಫೋಟೋಗ್ರಾಫರ್ ಆಗಿ ಸುಹಾಸ್ ಕೆಲಸ ಮಾಡುತ್ತಿದ್ದಾರೆ. ಇನ್ನು ನೆಚ್ಚಿನ ನಟಿಯ ಹೊಸ ಬಾಳಿಗೆ ಫ್ಯಾನ್ಸ್ ಕೂಡ ಶುಭಹಾರೈಸಿದ್ದಾರೆ.(ಎಸ್.ಎಂ)

Leave a Reply

comments

Related Articles

error: