ಕರ್ನಾಟಕಪ್ರಮುಖ ಸುದ್ದಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಿ: ಡಾ.ನಂಜುಂಡೇಗೌಡ

ರಾಜ್ಯ (ಮಡಿಕೇರಿ),ಆ. 11:-ಆಗಸ್ಟ್, 12 ರಿಂದ 25 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸುವುದು, ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಮೇಲುಸ್ತುವಾರಿ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಅವರು ಹೇಳಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪವಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಬೇಕು. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರೀಕ್ಷಾ ಕಾರ್ಯಗಳಿಗೆ ಅಗತ್ಯವಿರುವ ವಾಹನ ಸೌಕರ್ಯಗಳನ್ನು ಒದಗಿಸಲು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಅವರು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಅವರು ಮಾತನಾಡಿ 2022 ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ ಮತ್ತು ಮಡಿಕೇರಿ ಆಯಾಯ ತಾಲ್ಲೂಕು ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದರು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಒಟ್ಟು 1,182 ವಿದ್ಯಾರ್ಥಿಗಳು ಬರೆಯಲಿದ್ದು, ಅದರಲ್ಲಿ 714 ವಿದ್ಯಾರ್ಥಿಗಳು, 468 ವಿದ್ಯಾರ್ಥಿನೀಯರು ಹಾಗೂ 584 ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು, 598 ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 419 ವಿದ್ಯಾರ್ಥಿಗಳು ಕಲಾ ವಿಭಾಗದಿಂದ, 602 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಿಂದ ಮತ್ತು 161 ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಿಂದ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬೆಳ್ಳಿಯಪ್ಪ ಇತರರು ಇದ್ದರು. (ಜಿ. ಕೆ, ಎಸ್. ಎಚ್)

Leave a Reply

comments

Related Articles

error: