ಕರ್ನಾಟಕಪ್ರಮುಖ ಸುದ್ದಿ

ಕಕ್ಕರಗೊಳ್ಳ ಗ್ರಾಮದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ

ರಾಜ್ಯ (ದಾವಣಗೆರೆ) ಆ.12:- ಜಂತುಹುಳುಗಳು ಮಕ್ಕಳ ಆರೋಗ್ಯವನ್ನು ಕೆಡಸಿ ಅದರಿಂದ ರಕ್ತ ಹೀನತೆ, ಪೌಷ್ಠಿಕಾಂಶದ ಕೋರತೆ ಹೆಚ್ಚಾಗುತ್ತದೆ ಎಂದು ಕಕ್ಕರಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು
ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ “ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಂತುಹುಳುಗಳು ಮಕ್ಕಳ ದೇಹದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ನಿಶಕ್ತಿ ಮತ್ತು ಹೊಟ್ಟೆನೋವು, ವಾಕರಿಕೆ, ವಾಂತಿ, ತೂಕ ಕಡಿಮೆ ಆಗುವ ಲಕ್ಷಣ ಕಂಡುಬರುತ್ತವೆ. ಆದ್ದರಿಂದ ಜಂತುಹುಳು ನಿವಾರಣಾ (ಅಲಬೆಂಡೊಜೋಲ್) ಮಾತ್ರೆಯನ್ನು ಮಕ್ಕಳು ಸೇವಿಸುವುದರಿಂದ ಆರೋಗ್ಯ, ವಿದ್ಯಾಭ್ಯಾಸ ಫಲಿತಾಂಶದಲ್ಲಿ ಏರುಮುಖದ ಬೆಳವಣಿಗೆಯನ್ನು ಕಾಣಬಹುದು. 01 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಸರ್ಕಾರಿ ಮತ್ತು ಅನುದಾನಿತ ಎಲ್ಲಾ ಅಂಗನವಾಡಿ/ಶಾಲಾ/ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಲ್ಲಾರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಇಲಾಖೆಯ ಅಧಿಕಾರಿ/ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು. (ಜಿ. ಕೆ, ಎಸ್. ಎಚ್)

Leave a Reply

comments

Related Articles

error: