ಮೈಸೂರು

ಆ.15ರಂದು ಶಾರದಾವಿಲಾಸ ವಿದ್ಯಾಸಂಸ್ಥೆಯಲ್ಲಿ 75ನೇ ಅಮೃತ ಸ್ವಾತಂತ್ರ್ಯೋತ್ಸವ

ಮೈಸೂರು, ಆ.13:-ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಆ.15ರಂದು ಸೋಮವಾರ ಬೆಳಿಗ್ಗೆ 8 ಗಂಟೆಗೆ 75ನೇ ಅಮೃತ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.

ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆ ಅಧ್ಯಕ್ಷರಾದ ಡಾ.ಬಿ.ಎಂ.ಸುಬ್ರಾಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ರಾಷ್ಟ್ರಪತಿಗಳಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಡಾ.ವಿ.ವಿ.ಗಿರಿಯವರ ಮೊಮ್ಮಗ ಬೆಂಗಳೂರಿನ ಸುದೀಕ್ಷಾ ಗ್ರೂಪ್‍ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಬ್ರಹ್ಮಣ್ಯ ಶರ್ಮ ಜಿ. ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸ್ಥೆ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿರುತ್ತಾರೆ. ಈ ಬಾರಿಯ ವಿಶೇಷವೆಂದರೆ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ 75 ಮಂದಿ ಮಹನೀಯರನ್ನು ಗುರುತಿಸಿ, ಸನ್ಮಾನಿಸಿ, ಗೌರವಿಸಲಾಗುವುದು. ಸಂಸ್ಥೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದೇಶಭಕ್ತಿಗೀತೆ, ಸಮೂಹ ಗಾಯನ, ನೃತ್ಯ ಮುಂತಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: