ಮೈಸೂರು

ಮಹಾಜನ ಕಾಲೇಜಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಿತ್ತಿ ಚಿತ್ರಗಳು ಹಾಗೂ ಪುಸ್ತಕ ಪ್ರದರ್ಶನ

ಮೈಸೂರು, ಆ.13: – ಭಾರತದ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ನಗರದ ಜಯಲಕ್ಷ್ಮೀಪುರಂ ಎಸ್‍ಬಿಆರ್‍ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತ) ಗ್ರಂಥಾಲಯ ಅಧ್ಯಯನ ವಿಭಾಗದಲ್ಲಿ ಕಾಲೇಜಿನ ಇತಿಹಾಸ ವಿಭಾಗ, ಗ್ರಂಥಾಲಯ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಿತ್ತಿ ಚಿತ್ರಗಳು ಹಾಗೂ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದ ಉದ್ಘಾಟನೆಯನ್ನು ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕ ಕಛೇರಿ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿಗಳಾದ ಡಾ. ಬಿ.ಕೆ. ಕೆಂಪೇಗೌಡ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ತಮ್ಮ ತನು, ಮನಗಳನ್ನು ಪಣಕ್ಕಿಟ್ಟು ಹೋರಾಡಿದಂತಹ ಮಹನೀಯರುಗಳನ್ನು ನೆನಪಿಸುವಂತಹ ಅಪರೂಪದ ಕಾರ್ಯಕ್ರಮ ಇದಾಗಿದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರೀಯ ಚಳುವಳಿಯ ಘಟನೆಗಳನ್ನು ಬಿಂಬಿಸುವ ಭಿತ್ತಿಚಿತ್ರಗಳು, ಛಾಯಾಚಿತ್ರಗಳು ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಕೃತಿಗಳು, ಅಪರೂಪ ನಾಣ್ಯಗಳು ಪ್ರದರ್ಶಿಸಲ್ಪಟ್ಟವು. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದ ಮಹಾಜನ ಸಂಸ್ಥೆಗೆ ಕೃತಜ್ಞತೆ ಅರ್ಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಆರ್. ಜಯಕುಮಾರಿ ಮಾತನಾಡಿ ಈ ಕಾರ್ಯಕ್ರಮ ಆಯೋಜನೆಗೆ, ಭಿತ್ತಿಚಿತ್ರಗಳನ್ನು ರಚಿಸುವಲ್ಲಿ ವಿದ್ಯಾರ್ಥಿಗಳ ಪರಿಶ್ರಮ ಎದ್ದು ಕಾಣತ್ತಿದೆ ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಇಂತಹ ಪ್ರದರ್ಶನಗಳಿಂದ ವಿದ್ಯಾರ್ಥಿಗಳಲಿ ಆತ್ಮಸ್ಥೈರ್ಯ, ವಿಶ್ವಾಸಗಳು ಅವರ ಕ್ರಿಯಾಶೀಲ ಬೆಳವಣಿಗೆಗೆ ಕಾರಣವಾಗುತ್ತದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮುರಳೀಧರ ಭಾಗವತ್, ಗೌ.ಕಾರ್ಯದರ್ಶಿಗಳಾದ ಡಾ. ಟಿ. ವಿಜಯಲಕ್ಷ್ಮಿ ಮುರಳೀಧರ್ ಅವರು ಪ್ರದರ್ಶನವನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಸಿದರು.

ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಶೈಕ್ಷಣಿಕ ಡೀನ್‍ ರವರಾದ ಡಾ. ಶ್ರೀಧರ ಹೆಚ್‍ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಗ್ರಂಥಪಾಲಕರಾದ ವೀಣಾ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಚ್.ಆರ್. ತಿಮ್ಮೇಗೌಡ, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಂದೀಶ್ ಎ.ಆರ್, ಗ್ರಂಥಾಲಯದ ಸಿಬ್ಬಂದಿವರ್ಗದವರು ಮತ್ತು ಕಾಲೇಜಿನ ಅಧ್ಯಾಪಕರು, ಅಧ್ಯಾಪಕೇತರರು, ವಿದ್ಯಾರ್ಥಿಗಳು ಹಾಗೂ ಮಹಾಜನ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ವಿದ್ಯಾರ್ಥಿಗಳು, ಸಿಬ್ಬಂದಿವರ್ಗದವರು ಈ ಪ್ರದರ್ಶನವನ್ನು ವೀಕ್ಷಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: