ಕರ್ನಾಟಕಪ್ರಮುಖ ಸುದ್ದಿ

ತುಂಗಭದ್ರಾ ನದಿ ನಡುಗಡ್ಡೆಯಲ್ಲಿ ಸಿಲುಕಿದ 120 ಕುರಿ ಮತ್ತು ಕುರಿಗಾರರ ರಕ್ಷಣೆ

ರಾಜ್ಯ(ಕೊಪ್ಪಳ),ಆ.13 : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದೇವಘಾಟ ಸಮೀಪ ಇರುವ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಕುರಿಗಾರರನ್ನು ಹಾಗೂ 120 ಕುರಿಗಳನ್ನು ರಕ್ಷಣೆ ಮಾಡಲಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಕುರಿಗಾರರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಕಳೆದ 2-3 ದಿನಗಳಿಂದ ಕುರಿಗಾರರು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎನ್ನುವ ಮಾಹಿತಿ ಮೇರೆ ತಾಲೂಕು ಆಡಳಿತ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಎನ್ ಡಿಆರ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದೊಂದಿಗೆ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಎನ್ಡಿಆರ್ಎಫ್ ತಂಡದ 16 ಜನರ ಹಾಗೂ ಅಗ್ನಿ ಶಾಮಕ ದಳದ 12 ಜನರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಕುರಿಗಾರರು ಹಾಗೂ 120 ಕುರಿಗಳನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ.(ಎಸ್.ಎಂ)

Leave a Reply

comments

Related Articles

error: