ಮೈಸೂರು

ಶ್ರೀಕಾಂತ ವಿದ್ಯಾಸಂಸ್ಥೆಯ ಆವರಣದಲ್ಲಿ ಆ.15ರಂದು 75 ಸ್ವಾತಂತ್ರ್ಯೋತ್ಸವ

ಮೈಸೂರು, ಆ.13:- ನಗರದ ಶಂಕರ ಮಠ ಬಡಾವಣೆಯ ಶ್ರೀಕಾಂತ ವಿದ್ಯಾಸಂಸ್ಥೆಗಳ ಆವರಣದಲ್ಲಿ ಆ.15ರಂದು ಸೋಮವಾರ ಬೆಳಿಗ್ಗೆ 8.30ಕ್ಕೆ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಲಿದೆ.

ಕೆ.ಎನ್.ವರದರಾಜ ಅಯ್ಯಂಗಾರ್ ಮೆಮೋರಿಯರ್ ಟ್ರಸ್ಟ್ ನ ಅಧ್ಯಕ್ಷ ಆರ್.ಜಿ.ನರಸಿಂಹ ಅಯ್ಯಂಗಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಧ್ವಜಾರೋಹಣ ಹಾಗೂ ಮುಖ್ಯ ಅತಿಥಿಗಳಾಗಿ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್.ಎಂ.ನವೀನ್ ಕುಮಾರ್ ಭಾವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸುಬ್ಬಲಕ್ಷ್ಮಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸೋಮಶೇಖರ್, ಪದವಿ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆಯ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: