ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಹನಿಟ್ರ್ಯಾಪ್ ಆರೋಪ : ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಅರೆಸ್ಟ್

ರಾಜ್ಯ(ಬೆಂಗಳೂರು),ಆ.13 : ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ ಆರೋಪದ ಮೇರೆಗೆ ಉದಯೋನ್ಮುಖ ನಟನನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತ ಆರೋಪಿ ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ. ಪೊಲೀಸರ ಅತಿಥಿಯಾಗಿರುವ ಆರೋಪಿ ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು ಎನ್ನಲಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಇತ್ತೀಚಿಗೆ ಉದ್ಯಮಿಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ಬಳಿಕ ಉದ್ಯಮಿಯನ್ನು ಭೇಟಿಯಾಗಿ ತಾನು ಕ್ರೈಂ ಪೊಲೀಸ್ ಎಂದು ಸುಳ್ಳು ಹೇಳಿ ಹೆದರಿಸಿದ್ದ. ಇಬ್ಬರು ಯುವತಿಯರ ಜೊತೆಗೆ ಅಶ್ಲೀಲ ಮೆಸೇಜ್ ಮಾಡಿದ್ದ ಪರಿಣಾಮ ಕೇಸ್ ದಾಖಲಾಗಿದೆ ಎಂದು ಉದ್ಯಮಿಗೆ ಹೆದರಿಸಿದ್ದ.

ಅಷ್ಟೆಯಲ್ಲದೆ ಕೇಸನ್ನು ಇಲ್ಲಿದೆ ನಿಲ್ಲಿಸುತ್ತೇವೆ ಎಂದು ಹೇಳಿ ಹಣ ವಸೂಲಿಗೆ ಮುಂದಾಗಿದ್ದ ಎನ್ನುವ ಆರೋಪ ಕೇಳಿಬಂದಿದೆ. ಯುವರಾಜ್ ಬೆದರಿಕೆಗೆ ಹೆದರಿ ಉದ್ಯಮಿ ಮೊದಲು ಐವತ್ತು ಸಾವಿರ, ನಂತರ ಮೂರು ಲಕ್ಷ ರೂಪಾಯಿ ಹೀಗೆ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚಿನ ಹಣ ಕೊಟ್ಟಿದ್ದಾರೆ. ಉದ್ಯಮಿಗೆ ಅನುಮಾನ ಬಂದ ನಂತರ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.(ಎಸ್.ಎಂ)

Leave a Reply

comments

Related Articles

error: