ಮೈಸೂರು

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ : ಪೊಲೀಸರಿಂದ ಸಂಕಲ್ಪ ನಡಿಗೆ


ಮೈಸೂರು,ಆ.13:- ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75ವರ್ಷ ತುಂಬಿದ್ದು, ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ಮೈಸೂರಿನ ಬನ್ನಿಮಂಟಪದಲ್ಲಿರುವ ಪಂಜಿನ ಕವಾಯತು ಮೈದಾನದಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಂಕಲ್ಪ ನಡಿಗೆಯಲ್ಲಿ ಡಿಸಿಪಿ ಪ್ರದೀಪ್ ಗುಂಟಿ ಸೇರಿದಂತೆ ನೂರಾರು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಜಾಥಾದಲ್ಲಿ ಅಶ್ವವನ್ನೇರಿ ಡಿಸಿಪಿ ಪ್ರದೀಪ್ ಗುಂಟಿ ಗಮನ ಸೆಳೆದರು. ಬೋಲೋ ಭಾರತ್ ಮಾತಾಕಿ ಜೈ, ವಂದೇ ಮಾತರಂ, ಭಾರತ ಮಾತೆಗೆ ಜಯವಾಗಲಿ ಎಂಬ ಘೋಷಣೆಗಳು ಮೊಳಗಿದವು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: