ಮೈಸೂರು

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪಥಸಂಚಲನ ತಾಲೀಮು


ಮೈಸೂರು,ಆ.13:- ಸೋಮವಾರ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು ಇಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಪಥ ಸಂಚಲನ ಪ್ರದರ್ಶನದ ತಾಲೀಮು ನಡೆಯಿತು.

ಬೆಳಿಗ್ಗೆ 8ಗಂಟೆಯಿಂದ 10ಗಂಟೆಯವರೆಗೆ ನಡೆದ ಈ ತಾಲೀಮಿನಲ್ಲಿ ಸಿವಿಲ್ ಪೊಲೀಸ್, ಕೆಎಸ್ ಆರ್.ಪಿ, ಸಿಎಆರ್, ಡಿಎಆರ್, ಮೌಂಟೆಡ್ ಪೊಲೀಸ್, ಅಗ್ನಿಶಾಮಕ ದಳ, ಗೃಹರಕ್ಷಕದಳದ ತುಕಡಿಗಳು ಭಾಗವಹಿಸಿದ್ದವು.

ಎಲ್ಲರೂ ಸಮವಸ್ತ್ರಗಳನ್ನು ಧರಿಸಿ ಶಿಸ್ತಿನಿಂದ ತಾಲೀಮು ನಡೆಸುತ್ತಿರುವುದು ಕಂಡು ಬಂತು. ತಾಲೀಮಿನಲ್ಲಿ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ ಮತ್ತಿತರರು ಪಾಲ್ಗೊಂಡಿದ್ದರು. ಡಾ.ಚಂದ್ರಗುಪ್ತ ವಂದನೆ ಸ್ವೀಕರಿಸಿದರು.


ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದೆರಡುವರ್ಷಗಳಿಂದ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ರದ್ದುಪಡಿಸಲಾಗಿತ್ತು. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೂಡ ತಾಲೀಮಿನಲ್ಲಿ ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ವಂದನೆ ಸಲ್ಲಿಸಲಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: