ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಕಾಂತಾರ ಸಿನಿಮಾ ‘ಸಿಂಗಾರ ಸಿರಿಯೆ’ ಸಾಂಗ್ ರಿಲೀಸ್

ರಾಜ್ಯ(ಬೆಂಗಳೂರು),ಆ.16 : ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಹಾಡು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಅದರಂತೆಯೇ  ಚಿತ್ರದಸಿಂಗಾರ ಸಿರಿಯೆಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಹಾಡಿನಲ್ಲಿ ರಿಷಭ್ ಕಂಡು ಅಭಿಮಾನಿಗಳು ಮಸ್ತ್ ಮಸ್ತ್ಎಂದು ಅವರದ್ದೇ ಶೈಲಿಯ ಡೈಲಾಗ್ ಹೇಳುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವಸಿಂಗಾರ ಸಿರಿಯೆಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ನಿರ್ದೇಶಕ ರಿಷಬ್ ಶೆಟ್ಟಿ ತೋರಿದ್ದಾರೆ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ ಹಾಡಿನಲ್ಲಿ ಸೊಗಸಾಗಿ ಮೂಡಿಬಂದಿದೆ.  ಅಲ್ಲದೇ ಹಾಡಿನ ಕಾನ್ಸೆಪ್ಟ್ ಕೂಡ ನೋಡುಗರಿಗೆ ಹಿಡಿಸಿದೆ. ಹೀಗಾಗಿ ಗೀತೆಯನ್ನು ಅಭಿಮಾನಿಗಳು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್,   ಅನನ್ಯ ಭಟ್ ಹಾಗೂ ಪನ್ನಾರ್ ವಲ್ಟುರ್ ಅವರ ಇಂಪಾದ ಗಾಯನ ಹಾಡಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರ ಅಭಿನಯ ಅದ್ಭುತವಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ಯಾವಾಗ ತೆರೆಗೆ ಬರುವುದೊ? ಎಂಬ ಕಾತುರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.(ಎಸ್.ಎಂ)

Leave a Reply

comments

Related Articles

error: