ಕರ್ನಾಟಕಪ್ರಮುಖ ಸುದ್ದಿ

ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಮನೆಯಲ್ಲೂ ಅಕ್ಕ-ತಂಗಿಯರು ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ ; ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್

ರಾಜ್ಯ(ಕಲಬುರಗಿ),ಆ.16 : ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಮನೆಯಲ್ಲೂ ಅಕ್ಕತಂಗಿಯರು ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಲಂಚಮಂಚದ ಸರ್ಕಾರ ಹೇಳಿಕೆ ವಿಚಾರವನ್ನು ತೀವ್ರವಾಗಿ ಖಂಡಿಸಿದ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ರೀತಿಯ ಹೇಳಿಕೆಗಳು ಶೋಭೆ ತರುವುದಿಲ್ಲ. ಲಂಚದ ಬಗ್ಗೆ ಮಾತನಾಡುತ್ತಾರೆ ಸರಿ, ಆದರೆ ಮಂಚದ ಬಗ್ಗೆ ಮಾತನಾಡಿ ರಾಜ್ಯದ ಮಹಿಳೆಯರ ಗೌರವ ತೆಗೆಯುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಸಹ ಒಬ್ಬ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದರು. ಅವರ ಮನೆಯಲ್ಲೂ ಸಹ ಅಕ್ಕತಂಗಿಯರು ಇದ್ದಾರೆ. ಅವರು ಕೂಡ ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ? ಮಾತಾಡಬೇಕಾದರೆ ನಾಲಿಗೆ ಮೇಲೆ ಹಿಡಿತ ಇರಲಿ. ಮಂಚ ಹತ್ತಿ ನೌಕರಿಗೆ ಹೋಗಿರುವ ಒಂದೇ ಒಂದು ಉದಾಹರಣೆ ಕೊಡಲಿ. ಬಾಯಿಮಾತಿಗೆ ಏನೇನೋ ಮಾತನಾಡಿದರೆ ಸರಿ ಇರುವುದಿಲ್ಲ. ಹೇಳಿಕೆಯಿಂದ ಮಹಿಳೆಯರಿಗೆ ಪ್ರಿಯಾಂಕ್ ಅಗೌರವ ತೋರಿದ್ದಾರೆ. ರೀತಿಯ ಹೇಳಿಕೆ ಕುಟುಂಬಗಳಲ್ಲಿ ಬಿರುಕು ಮೂಡಿಸುತ್ತವೆ. ಇಂತಹ ನೀಚ ಮಾತು ಹೇಳುವುದು ಅವರಿಗೆ ಗೌರವತರಲ್ಲ. ಹೆಣ್ಣು ಮಕ್ಕಳನ್ನು ಗೌರವದಿಂದ ನೋಡಿ ಎಂದು ಗುಡುಗಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು, ಪ್ರಚಾರದ ಗೀಳಿಗಾಗಿ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಅವರು ಈಗಲೇ ರಾಜ್ಯದ ಮಹಿಳೆಯರ ಕ್ಷಮೆ ಕೇಳಲಿ. ಸರ್ಕಾರದ ಬಗ್ಗೆ ಮಾತಾಡಲು ಅವರ ಬಳಿ ಏನು ಉಳಿದಿಲ್ಲ. ಅದಕ್ಕಾಗಿ ರೀತಿ ಕೀಳು ಮಟ್ಟದ ಹೇಳಿಕೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.(ಎಸ್.ಎಂ)

Leave a Reply

comments

Related Articles

error: