ಮೈಸೂರು

ಗಲಭೆ ಪ್ರಕರಣದಲ್ಲಿ ಸುಳ್ಳು ಕೇಸ್ ದಾಖಲು ಖಂಡಿಸಿ ಪ್ರತಿಭಟನೆ

ಮೈಸೂರು,ಆ.17:- ಕೊಪ್ಪಳಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದಿರುವ ಗಲಭೆ ಪ್ರಕರಣದಲ್ಲಿ ಸಣ್ಣಹನುಮಂತಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಭಾರತ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್ ವಾದಿ-ಲೆನಿನ್ ವಾದಿ ) ಲಿಬರೇಷನ್ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಬಳಿ ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಸಣ್ಣ ಹನುಮಂತ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು. ಮತ್ತು ಅವರ ಮೇಲಿರುವ ಆರೋಪಗಳನ್ನು ಕೈಬಿಡಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣ ಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ್ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು. ಹುಲಿ ಹೈದರ್ ಗ್ರಾಮದಲ್ಲಿ ಶಾಂತಿ, ನ್ಯಾಯ ಮತ್ತು ಸಾಮರಸ್ಯವನ್ನು ಖಚಿತಪಡಿಸಲು ಅಗತ್ಯ ಕ್ರಮವನ್ನು ವಹಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾದಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಚೌಡಹಳ್ಳಿ ಜವರಯ್ಯ, ಸುಬ್ರಮಣಿ, ನಾ.ದಿವಾಕರ, ಜಯರಾಂ, ಪಿ.ಎ.ಕುಮಾರ, ಗಂಗಾಧರ, ರವಿಕುಮಾರ ಸೇರಿದಂತೆ ಹಲವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: