ಕರ್ನಾಟಕಪ್ರಮುಖ ಸುದ್ದಿ

ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ : ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ರಾಜ್ಯ(ಬೆಂಗಳೂರು),ಆ.17 : ನಾನೇ ಮೇಧಾವಿ, ನಾನೇ ಬುದ್ಧಿವಂತ ಅಂದುಕೊಂಡಿದ್ದಾರೆ. ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ. ಸಚಿವರು ಇನ್ನೂ ಮುಂದಾದರೂ ಚೆನ್ನಾಗಿ ಕೆಲಸ ಮಾಡಿ. ಏನೇನೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬೇಡಿ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಮಾಧ್ಯಮದೊಂದಿಗೆ ಮಾತನಾಡಿ, ಸಚಿವ ಮಾಧುಸ್ವಾಮಿ ಸದನದ ಒಳಗೆ ವಿಪಕ್ಷಗಳನ್ನ ಸಮರ್ಥವಾಗಿ ಹಣಿಯುತ್ತಾರೆ. ಆದರೆ ಹೊರಗಡೆ ಯಾಕೆ ರೀತಿ ಹೇಳಿಕೆ ಕೊಡುತ್ತಾರೋ ಗೊತ್ತಿಲ್ಲ. ಯಾವ ಯಾವ ಕಾರಣಕ್ಕೋ ಸಚಿವರಾಗಿದ್ದಾರೆ. ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡ್ತೀವಿ. ಹಾದಿ ಬೀದಿಯಲ್ಲಿ ಚರ್ಚೆ ಮಾಡಲ್ಲ ಎಂದು ಗರಂ ಆಗಿದ್ದಾರೆ.(ಎಸ್.ಎಂ)

Leave a Reply

comments

Related Articles

error: