ನಮ್ಮೂರುಮೈಸೂರುಸುದ್ದಿ ಸಂಕ್ಷಿಪ್ತ

ಮೈಸೂರು ದಸರಾ ಮಹೋತ್ಸವ: ಅ.5 ರಂದು ರಾಜ್ಯಮಟ್ಟದ ಯೋಗ ಸಮ್ಮೇಳನ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದಂಗವಾಗಿ ಅ.5ರ ಬುಧವಾರದಂದು  ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಯೋಗ ಸಮ್ಮೇಳನವನ್ನು ಆಯೋಜಿಸಲಾಗಿದ್ದು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಸಚಿವ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ  ಸಂಸದರಾದ ಪ್ರತಾಪ್ ಸಿಂಹ, ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರು, ಕೆ.ಎಸ್. ಈಶ್ವರಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸ ಪ್ರಸಾದ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ವೆಂಕಟೇಶ್, ವಾಸು. ಸಾ.ರಾ.ಮಹೇಶ್. ಹಾಗೂ ಚಿಕ್ಕಮಾದು ಎಸ್.  ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್. ಧರ್ಮಸೇನಾ ಹಾಗೂ ಕೆ.ಟಿ.ಶ್ರೀಕಂಠೇಗೌಡ ಜಿ.ಪಂ.ಅಧ್ಯಕ್ಷೆ ನಯೀಮ್ ಸುಲ್ತಾನ ನಜೀರ್ ಅಹಮದ್ ಉಪಸ್ಥಿತರಿರುವರು.

Leave a Reply

comments

Related Articles

error: