ಸುದ್ದಿ ಸಂಕ್ಷಿಪ್ತ

ಮೇ, 23 : ಶ್ರದ್ಧಾಂಜಲಿ ಸಭೆ

ಮಡಿಕೇರಿ ಮೇ, 18:-ಈ ಹಿಂದೆ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ, ಅಕಾಲಿಕ ಮರಣ ಹೊಂದಿರುವ ಅನುರಾಗ್ ತಿವಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆಯು ಮೇ, 23 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ಶ್ರದ್ಧಾಂಜಲಿ ಸಭೆಗೆ ಜಿಲ್ಲಾ ಪಂಚಾಯಿತಿಯ ಎಲ್ಲಾ ಅಧಿಕಾರಿಗಳು, ಅಧೀನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಾಗಿ ಮೃತರ ಆತ್ಮಕ್ಕೆ ಶಾಂತಿ ಕೋರಬೇಕಾಗಿ ಸಿಇಓ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ,ಎಸ್.ಎಚ್)

 

Leave a Reply

comments

Related Articles

error: