ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ ಮೇ, 17:-ವಿರಾಜಪೇಟೆ ತಾಲ್ಲೂಕಿನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 2017-18ನೇ ಸಾಲಿಗೆ ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 1 ನೇ ತರಗತಿಯಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಳೆಗಳಲ್ಲಿ ಉಚಿತ ವಸತಿ, ಊಟ, ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರೆ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಹ ಅನುಪಾತವಾರು ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿಗಳನ್ನು ತಾಲೂಕು  ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ ಇಲ್ಲಿಂದ ಅಥವಾ ಸಂಬಂಧಿಸಿದ  ನಿಲಯ/ಆಶ್ರಮ ಶಾಲೆಗಳ ವಾರ್ಡನ್, ಮುಖ್ಯ  ಶಿಕ್ಷಕರಿಂದ ಪಡೆದು ಭರ್ತಿ  ಮಾಡಿದ ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಹಾಗೂ ಆಶ್ರಮ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಜೂನ್, 10 ರೊಳಗೆ ಸಲ್ಲಿಸುವಂತೆ ವಿರಾಜಪೇಟೆ ತಾಲೂಕು ಪೊನ್ನಂಪೇಟೆಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. (ಕೆಸಿಐ, ಎಸ್.ಎಚ್)

Leave a Reply

comments

Related Articles

error: