ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮಡಿಕೇರಿ ಮೇ, 17:-ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಸೀಟು ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯು.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್.ಎಂ.ಎಸ್, ಎಂ.ಸಿ.ಎ., ಎಂ.ಎಸ್ಸಿ(ಅಗ್ರಿ), ಮುಂತಾದ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ.1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.

2017-18ನೇ ಸಾಲಿಗೆ  ಸಾಲ ಪಡೆಯ ಬಯಸುವ  ಹಿಂದುಳಿದ  ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ  ಶುಲ್ಕವನ್ನು ಸಿ.ಇ.ಟಿ ಯಿಂದ ಸೀಟು ಪಡೆಯುವ  ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು  ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪಾವತಿಸಿದ ಮುಂಗಡ ಹಣದ ಮೊತ್ತದಲ್ಲಿ ಜಮಾ ಮಾಡಲಾಗುತ್ತದೆ.

2017-18ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ  ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ  ವ್ಯಾಸಂಗ ಮಾಡಲು ನಿಗಮದಿಂದ ಸಾಲ  ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ(ವಿಶ್ವಕರ್ಮ ಮತ್ತು ಉಪ ಜಾತಿಗಳನ್ನು ಹಾಗೂ ಅಲ್ಪಸಂಖ್ಯಾತರನ್ನು ಹೊರತುಪಡಿಸಿ), ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ್ದು, ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಅರ್ಜಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ದೂ.ಸಂ:08272-221656 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

 

Leave a Reply

comments

Related Articles

error: