ಮೈಸೂರು

ಕಾರಿನ ಮೇಲೆ ಮುರಿದು ಬಿದ್ದ ಮರ : ಕಾರು ಜಖಂ

ಮೈಸೂರು, ಮೇ.19: ಮೈಸೂರಿನಲ್ಲಿ ಗುರುವಾರ ಸಂಜೆ ಹಾಗೂ ಶುಕ್ರವಾರ ಬೆಳಿಗ್ಗೆ ಗಾಳಿ ಸಹಿತ ಮಳೆಯಾಗಿದೆ. ಭಾರೀ ಗಾಳಿಗೆ ನಗರದ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿ ಬಳಿ ನಿಲ್ಲಿಸಲಾದ ಕಾರೊಂದರ ಮೇಲೆ ಮರವೊಂದು ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ.

ಈ ಬಾರಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಬರುವಾಗಲೇ ಭಾರೀ ಅನಾಹುತವನ್ನು ಸೃಷ್ಟಿಸುತ್ತಿದೆ. ಈಗಾಗಲೇ ಮಳೆಯ ಆರಂಭದ ದಿನದಿಂದ ಇಲ್ಲಿಯವರೆಗೆ ನಗರದಾದ್ಯಂತ ಸುಮಾರು 50ಕ್ಕೂ ಅಧಿಕ ಮರಗಳು ಉರುಳಿ ಬಿದ್ದಿದ್ದು, 30ಕ್ಕೂ ಅಧಿಕ ವಾಹನಗಳು ಜಖಂಗೊಂಡಿವೆ.  ಸುಮಾರು 15ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.  ಶುಕ್ರವಾರ ಬೆಳಿಗ್ಗೆಯೂ ಕೂಡಾ ಸುರಿದ ಭಾರೀ ಮಳೆಗೆ ಮರವೊಂದು ಉರುಳಿ ಬಿದ್ದು ಕಾರಿಗೆ ಹಾನಿಯಾಗಿದೆ. ಪ್ರಾಣಾಪಾಯವೇನೂ ಸಂಭವಿಸಿಲ್ಲ. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: