ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ರಾಜ್ಯ,(ಮಡಿಕೇರಿ) ಮೇ 19: 2017-18ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು  ಮೇ, 31 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು 5ನೇ ತರಗತಿಯಲ್ಲಿ ಶೇ. 60ಕ್ಕಿಂತ  ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ್ ಎಜುಕೇಷನಲ್ ಇನ್ಸ್‍ಟ್ಯೂಷನ್ಸ್, ಪ್ರಶಾಂತಿ ನಿಲಯ, ಪೊನ್ನಂಪೇಟೆ, ದಕ್ಷಿಣ ಕೊಡಗು ಮತ್ತು ಸೈಂಟ್ ಜೋಸೆಫ್ ಗಲ್ರ್ಸ್ ಕಾಂಪೋಸಿಟ್ ಹೈಸ್ಕೂಲ್, ಮಡಿಕೇರಿ ಇಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).

ಅರ್ಜಿಯನ್ನು ಯೋಜನಾ  ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ  ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-249476, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115  ಇಲ್ಲಿಂದ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ. (ವರದಿ:ಕೆ.ಸಿಐ, ಎಲ್.ಜಿ)

Leave a Reply

comments

Related Articles

error: