ಸುದ್ದಿ ಸಂಕ್ಷಿಪ್ತ
ಅರ್ಜಿ ಆಹ್ವಾನ
ರಾಜ್ಯ, (ಮಡಿಕೇರಿ) ಮೇ 19: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2017-18ನೇ ಸಾಲಿಗೆ 9ನೇ ತರಗತಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2016-17ನೇ ಸಾಲಿನಲ್ಲಿ 7ನೇ ತರಗತಿಯಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ ಶಾಲೆಗಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಪ್ರಾಂಶುಪಾಲರು, ಜವಾಹರ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದೆ. ಜೂನ್ 24 ರಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ, ಮಡಿಕೇರಿ ಇಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ. (ವರದಿ:ಕೆ.ಸಿ.ಐ,ಎಲ್.ಜಿ)