ಸುದ್ದಿ ಸಂಕ್ಷಿಪ್ತ

ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಪ್ರವಾಸ ಮೇ.20ಕ್ಕೆ

ಮೈಸೂರು.ಮೇ.19 : ಮೇ.20ರಂದು ಬೆಳಿಗ್ಗೆ 10.30ಕ್ಕೆ ಗ್ರಾಮಾಂತರ ಬಿಜೆಪಿಯ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ಮತ್ತು ಜಿಲ್ಲಾ ಪದಾಧಿಕಾರಿಗಳು ಪಕ್ಷದ ಸಂಘಟನೆ ಮತ್ತು ಮತ್ತಿತರ ವಿಚಾರಗಳನ್ನು ಚರ್ಚಿಸಲು ಪ್ರವಾಸ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಹಾಲಿ ಪದಾಧಿಕಾರಿಗಳು ಮಾಜಿ ಅಧ್ಯಕ್ಷರ ಪದಾಧಿಕಾರಿಗಳ, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಮಾಜಿ ಶಾಸಕರು, ಜಿ.ಪಂ. ತಾ.ಪಂ. ಗಾ.ಪಂ.ಸದಸ್ಯರು, ಮಾಜಿ ಸದಸ್ಯರು, ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದವರು, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: