ಮೈಸೂರು

ವೈದ್ಯಕೀಯ ಸಮಾವೇಶಗಳಿಂದ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ವೃದ್ಧಿ: ಮಹದೇವಪ್ಪ

ಮೈಸೂರು, ಮೇ 19: ವೈದ್ಯಕೀಯ ಸಮಾವೇಶಗಳು ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲಿದ್ದು, ಇಂತಹ ಸಮಾವೇಶಗಳನ್ನು ಹೆಚ್ಚೆಚ್ಚು ಆಯೋಜಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಭಿಪ್ರಾಯಪಟ್ಟರು.

ಶುಕ್ರವಾರ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಿದ್ದ ಮೂರು ದಿನಗಳ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಮೈಸೂರು ವೈದ್ಯಕೀಯ ವಿದ್ಯಾಲಯಗಳ ಸಹಭಾಗಿತ್ವದಲ್ಲಿ ೩೫ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನವನ್ನು (ಕೆಪಿಕಾನ್ ೨೦೧೭) ಉದ್ಘಾಟಿಸಿ ಮಾತನಾಡಿದ ಅವರು, ಇಂದು ವೈದ್ಯಕೀಯ ರಂಗ ಸಾಕಷ್ಟು ಅಭಿವೃದ್ಧಿ ಕಂಡಿದೆ. ದಿನನಿತ್ಯ ನೂತನ ಆವಿಷ್ಕಾರ ಸಂಶೋಧನೆಗಳು ನಡೆಯುತ್ತಿವೆ. ವೈದ್ಯಕೀಯ ವಿದ್ಯಾರ್ಥಿಗಳು ಸವಾಲಿನ ಪ್ರಪಂಚದಲ್ಲಿದ್ದು, ಸವಾಲನ್ನು ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮಿಸಬೇಕು. ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯವಾದ ಸಂಶೋಧನೆಗಳನ್ನು ಕೈಗೊಳ್ಳುವ ಮೂಲಕ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಮೆರಿಕನ್ ಕಾಲೇಜ್ ಆಫ್ ಫಿಸಿಷಿಯನ್ ಇಂಡಿಯಾ ಚಾಪ್ಟರ್ ಗವರ್ನರ್ ಡಾ.ಅರುಮುಗಂ ಮುರುಗನಾಥನ್, ಕೆಪಿಕಾನ್ ೨೦೧೭ರ ವಿಜ್ಞಾನ ಸಮಿತಿ ಅಧ್ಯಕ್ಷ ಡಾ.ಬಿ.ಎಸ್.ನಾಗರಾಜು, ಡಾ.ವೈ.ಜೆ. ವಿಶ್ವೇಶ್ವರರೆಡ್ಡಿ, ಡಾ.ಎಂ.ರವಿಕೀರ್ತಿ, ಡಾ.ಜೆ.ಶರಣಪ್ಪ, ಏಪಿಐ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ.ಕೆ.ಆರ್.ರವೀಂದ್ರ, ಕಾರ್ಯದರ್ಶಿ ಡಾ.ಎಂ.ರವಿಕೀರ್ತಿ, ಸಲಹೆಗಾರ ಡಾ.ಎಂ.ಪ್ರೇಮನಾಥ್, ಸಂಚಾಲಕ ಡಾ.ಎಚ್.ಎಸ್.ಪ್ರಸನ್ನ, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: