
ಕರ್ನಾಟಕಪ್ರಮುಖ ಸುದ್ದಿ
ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ
ಪ್ರಮುಖಸುದ್ದಿ, ರಾಜ್ಯ(ತುಮಕೂರು)ಮೇ.19:- ತುಮಕೂರು ನಗರದ ಹೈಸ್ಕೂಲ್ ಮೈದಾನದ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಡಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಈತ ಗಾಂಜಾ ಸಾಗಿಸುತ್ತಿದ್ದ ಕುರಿತು ಅನುಮಾನಗೊಂಡು ವಿಚಾರಿಸಲಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತನಿಂದ 700 ಗ್ರಾಂ ಗಾಂಜಾ ವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಸಿಬಿ ಸಿಪಿಐ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – (ವರದಿ:ಕೆ.ಎಸ್,ಎಸ್.ಎಚ್)