
ಕರ್ನಾಟಕ
ಸಾಮಾನ್ಯ ಸಭೆಯಲ್ಲಿ ಕೈಕೈ ಮಿಲಾಯಿಸಿದ ಅಧಿಕಾರಿಗಳು
ರಾಜ್ಯ(ಹುಬ್ಬಳ್ಳಿ-ಧಾರವಾಡ)ಮೇ.20:– ಧಾರವಾಡದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಬ್ಬರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಎದುರೇ ಕೈಕೈ ಮಿಲಾಯಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವೈ ಡಿ ಕುನ್ನಬಾವಿ ಹಾಗೂ ಹುಬ್ಬಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೊಸಮನಿ ಕೈ ಕೈ ಮಿಲಾಯಿಸಿದ್ದಾರೆ. ಅಷ್ಟೇ ಅಲ್ಲದೇ ತುಂಬಿದ ಸಭೆಯಲ್ಲಿ ಪರಸ್ಪರ ಬೈದಾಡಿಕೊಂಡಿದ್ದಾರೆ. ಸಾಮಾನ್ಯ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದಿತ್ತು. ಈ ವೇಳೆ ಇಬ್ಬರೂ ದೇವರಗುಡಿಹಾಳ ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆಸಿದ್ದರಿಂದ ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಹೋಯಿತು. ಇನ್ನು ಈ ವೇಳೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಇಬ್ಬರು ಅಧಿಕಾರಿಗಳನ್ನು ಸಮಾಧಾನ ಪಡಿಸಿದರು. (ಎಸ್.ಎನ್,ಕೆ.ಎಸ್,ಎಸ್.ಎಚ್)