ಕರ್ನಾಟಕಪ್ರಮುಖ ಸುದ್ದಿ

ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಪಣ ತೊಡಬೇಕು : ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್

ರಾಜ್ಯ (ಮಡಿಕೇರಿ) ಮೇ.20:- ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಶನಿವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.
ಪ್ರತಿಜ್ಞಾ  ವಿಧಿ ಬೋಧಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಅಹಿಂಸೆ ಹಾಗೂ  ಸಹನೆಗೆ ಹೆಸರಾದ ಭಾರತ ರಾಷ್ಟ್ರದ  ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸಬೇಕೆಂದು ಕರೆ ನೀಡಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು  ಮತ್ತು ಮಾನವ ಜೀವಕ್ಕೆ ಹಾಗೂ  ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಅವರು  ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನೀರ್ ಅಹಮ್ಮದ್, ನಗರಸಭೆ ಪೌರಾಯುಕ್ತ ಬಿ.ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಷಂಶುದ್ದೀನ್ ಹಾಗೂ ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. (ಕೆಸಿಐ, ಎಸ್.ಎಚ್)

Leave a Reply

comments

Related Articles

error: