ಪ್ರಮುಖ ಸುದ್ದಿಮೈಸೂರು

ಕೈಸಾಲ ಪಡೆದು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೂ ಪರಿಹಾರ ನೀಡುವಂತೆ ಸಿಎಂ ಸೂಚನೆ

ಮೈಸೂರು, ಮೇ 20: ಕೈಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೂ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ನಡೆದ ಅಧಿಕಾರಿಗಳ ವಿಭಾಗ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬ್ಯಾಂಕ್ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಮಾತ್ರ ಈಗ  ಪರಿಹಾರ ನೀಡಲಾಗುತ್ತಿದೆ. ಇನ್ನೂ ಮುಂದೆ ಕೈಸಾಲವನ್ನೂ ಪರಿಗಣಿಸಿ ಪರಿಹಾರ ನೀಡುವಂತೆ  ಸಿಎಂ ಸೂಚಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ನೇರವಾಗಿ ಪ್ರವೇಶ ನೀಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.⁠⁠⁠⁠ (ವರದಿ: ಆರ್.ವಿ,ಎಲ್.ಜಿ)

Leave a Reply

comments

Related Articles

error: