ಕರ್ನಾಟಕಪ್ರಮುಖ ಸುದ್ದಿ

ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ

ಪ್ರಮುಖಸುದ್ದಿ, ರಾಜ್ಯ(ಚಾಮರಾಜನಗರ) ಮೇ.20:- ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ  ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಉಪಸ್ಥಿತರಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಜೈನ್ ಪ್ರಮಾಣವಚನ ಭೋದಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ  ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.  ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿದರು. – (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: