ಕರ್ನಾಟಕಮೈಸೂರು

ಸುತ್ತೂರು ಮಠಕ್ಕೆ ಭೇಟಿ

ಸೋಮವಾರ ಬೆಳಿಗ್ಗೆ ಸುತ್ತೂರು ಮಠಕ್ಕೆ ತೆರಳಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿ ಕರಿಸಿದ್ದಪ್ಪ ಜಗದ್ಗುರು ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿದರು.

ತನ್ನ ಮತ್ತು ಜೆಎಸ್ ಎಸ್ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾನಿಲಯದ ಮಧುರ ಕ್ಷಣಗಳನ್ನು ನೆನಪಿಸಿಕೊಂಡರು. ಭವಿಷ್ಯದ ದಿನಗಳಲ್ಲಿಯೂ ಗಣನೀಯ ಕಾರ್ಯಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ಜೆ ಎಸ್ ಎಸ್ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಜಿ.ಸಂಗಮೇಶ್ವರ ಮಾತನಾಡಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಡಿ ಕಾರ್ಯ ನಿರ್ವಹಿಸುವುದು ಖುಷಿ ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ತಾಂತ್ರಿಕತೆಯ ಕುರಿತಾದ ಜ್ಞಾನವನ್ನು ವೃದ್ಧಿಸಲಾಗುವುದು ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಸಯ್ಯದ್ ಶಕೀಬ್ ಉರ್ರ್ ರೆಹಮಾನ್, ಕುಲಸಚಿವ ಡಾ.ಲೋಕೇಶ್ ಈ ಸಂದರ್ಭ ಉಪಸ್ಥಿತರಿದ್ದರು.

Leave a Reply

comments

Related Articles

error: