ಕರ್ನಾಟಕಪ್ರಮುಖ ಸುದ್ದಿ

ಕುಡಿಯುವ ನೀರಿಗೆ ಅಡಚಣೆಯಾಗದಂತೆ ಪರಿಣಾಮಕಾರಿ ಕ್ರಮ : ಸಿಎಂ ಸಿದ್ದರಾಮಯ್ಯ

ಪ್ರಮುಖಸುದ್ದಿ, ರಾಜ್ಯ(ಹಾಸನ)ಮೇ.21:-  ಕೃಷ್ಣ ನದಿ ನೀರಿಲ್ಲದೆ ಬತ್ತಿ ಹೋಗಿದ್ದ ಕಾರಣ  ಮಹಾರಾಷ್ಟ್ರದಿಂದ ನೀರನ್ನು ಬಿಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾಸನ ನಗರದ ಮಹಾರಾಜ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಜಾನುವಾರುಗಳಿಗೆ ಮೇವು ಮತ್ತು ಜನರಿಗೆ ಕುಡಿಯುವ ನೀರಿಗೆ ಅಡಚಣೆ ಆಗದಂತೆ ಪರಿಣಾಮಕಾರಿಯಾಗಿ  ಕ್ರಮ ಕೈಗೊಳ್ಳಲಾಗಿದೆ.  ಜನರು ಗುಳೆ ಹೋಗದಂತೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಜನರು ಗುಳೆ ಹೋಗುವುದು ಕಡಿಮೆಯಾಗಿದೆ. ಈ ಸಲ ರಾಜ್ಯದಲ್ಲಿ ಒಳ್ಳೆ ಮಳೆ ಆಗಲಿ ಎಂದು ಹಾಸನಾಂಬೆಯಲ್ಲಿ ಪ್ರಾಥನೆ ಮಾಡುತ್ತೇನೆ ಎಂದರು.
ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಮಾಡುತ್ತಿದ್ದೇವೆ. ಕೆರೆಗಳಿಗೆ ನೀರು ತುಂಬಿಸಲು ಐದು ಸಾವಿರ ಕೋಟಿ ರೂ.ಹಣ ಮೀಸಲು ಇಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಕಾಂಗ್ರೆಸ್ ನ ಪ್ರಮುಖರು ಉಪಸ್ಥಿತರಿದ್ದರು. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: