ಸುದ್ದಿ ಸಂಕ್ಷಿಪ್ತ

ಭದ್ರತೆಗೆ ವಿಶೇಷ ಕಾಳಜಿ : ನಾಗರಿಕರೊಂದಿಗೆ ಸಂಯಮದಿಂದ ವರ್ತಿಸಿ –ಪೊಲೀಸ್ ಕಮಿಷನರ್ ಬಿ.ದಯಾನಂದ್ ಕರೆ

 

police-commissio-b-dayanandನಾಡಹಬ್ಬ ದಸರಾ ಸಂದರ್ಭದಲ್ಲಿ ಕೇಂದ್ರ ಸ್ಥಳಗಳಲ್ಲಿ ನಿಯೋಜನೆಗೊಳ್ಳುವವರು ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು. ಗಣ್ಯರ ಭದ್ರತೆ ಬಗ್ಗೆ ಕಾಳಜಿ ವಹಿಸಿ ಮತ್ತು ದೇಶ ವಿದೇಶಗಳಿಂದ ಆಗಮಿಸುವ ಲಕ್ಷಾಂತರ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ನೀಡಿ ಅವರೊಂದಿಗೆ ಸಂಯಮದಿಂದ ವರ್ತಿಸಿ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಪೊಲೀಸ್ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.

ಅವರು ಇತ್ತೀಚೆಗೆ ನಗರದ ಸಿಎಅರ್ ನ ಪೊಲೀಸ್ ಪರೇಡ್ ಮೈದಾನದಲ್ಲಿ ದಸರಾ ಮಹೋತ್ಸವದ ಭದ್ರತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿ ನಗರದ ಬಸ್ – ರೈಲ್ವೆ ನಿಲ್ದಾಣಗಳಲ್ಲಿ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ಹಾಗೂ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರಿಕೆಯಿಂದಿರಿ. ಅನುಮಾನಾಸ್ಪದ ವ್ಯಕ್ತಿಗಳನ್ನು ತಕ್ಷಣವೇ ವಿಚಾರಣೆ ನಡೆಸಿ, ಗೋಲ್ಡ್ ಕಾರ್ಡ್ , ಪಾಸ್ ಮತ್ತು ಗುರುತಿನ ಚೀಟಿಯನ್ನು ಸಮಗ್ರವಾಗಿ ಪರಿಶೀಲಿಸಿ ನಗರದಲ್ಲಿ ಅಹಿತಕರ ಘಟನೆ ಸಂಭವಿಸದಂತೆ ವಿಶೇಷ ಜಾಗೃತರಾಗಿರಿ ಹಾಗೂ ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಲು ತಿಳಿಸಿದರು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು, ಮುಖ್ಯಮಂತ್ರಿ, ಸಚಿವರುಗಳು ಹಾಗೂ ಅನೇಕ ಗಣ್ಯರು ನಗರಕ್ಕೆ ಆಗಮಿಸಲಿದ್ದು ಅವರುಗಳ ಸೂಕ್ತ ರಕ್ಷಣೆಯ ಗುರುತರ ಜವಾಬ್ದಾರಿಯ ಹೊಣೆಯು ನಿಮ್ಮ ಮೇಲಿದ್ದು ಯಶಸ್ವಿಯಾಗಿ ನಿಭಾಯಿಸಿ ಎಂದು ಹಾರೈಸಿದರು. ಸುಸೂತ್ರ ದಸರಾ ಆಚರಣೆ ಹಿನ್ನಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆಯೂ ಜರುಗಿ ಮುನ್ನೆಚ್ಚರಿಕೆಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಸಭೆಯಲ್ಲಿ ಡಿಸಿಪಿಗಳಾದ ಡಾ.ಎಚ್.ಟಿ.ಶೇಖರ್, ರುದ್ರಮುನಿ ಹಾಗೂ ಇನ್ನಿತರರು ಭಾಗವಹಿಸಿದ್ದರು.

 

Leave a Reply

comments

Related Articles

error: