ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಸರ್ಕಾರ ಪ್ರಾಮಾಣಿಕ ಅಧಿಕಾರಿಗಳನ್ನು ಕೊಲೆ ಮಾಡುತ್ತಿದೆ : ಪ್ರಮೋದ್ ಮುತಾಲಿಕ್ ಆರೋಪ

ಪ್ರಮುಖಸುದ್ದಿ, ರಾಜ್ಯ(ಹುಬ್ಬಳ್ಳಿ) ಮೇ.22:- ಪ್ರಾಮಾಣಿಕ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕೊಲೆ ಮಾಡುತ್ತಿದೆ ಎಂದು ಶ್ರೀರಾಮ ಸೇನಾ ಸಂಘಟನೆಯ ಮುಖಂಡ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಕೊಲೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು  ತಮ್ಮ ಭ್ರಷ್ಟಾಚಾರದ ಗುಟ್ಟು ಬಯಲಾಗುತ್ತಿದೆ ಎಂಬ ಕಾರಣಕ್ಕಾಗಿ ರಾಜ್ಯ ಸರ್ಕಾರವೇ ಅಧಿಕಾರಿಗಳನ್ನು ಕೊಲೆ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಪ್ರಾಮಾಣಿಕ ಅಧಿಕಾರಿಗಳನ್ನು ಕೊಲೆ ಮಾಡಿದೆ. ಸಂಪೂರ್ಣ ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡುವ ಭರವಸೆ ನೀಡಿದ ಸರ್ಕಾರದಲ್ಲಿಯೇ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಮಾಣಿಕರು ಯಾರೂ ಇಲ್ಲದಂತೆ ಈ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಪ್ರಮೋದ್  ಮುತಾಲಿಕ್ ವಾಗ್ದಾಳಿ ನಡೆಸಿದರು. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: