ನಮ್ಮೂರುಪ್ರಮುಖ ಸುದ್ದಿಮೈಸೂರು

ಚಾಮುಂಡೇಶ್ವರಿ ದರ್ಶನ ಪಡೆದ ನಟ ಶಿವರಾಜುಕುಮಾರ್

ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜಕುಮಾರ್ ಕುಟುಂಬಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಅವರು ಇಂದು ಸಂಜೆ ಯುವ ದಸರಾ ಕಾರ್ಯಕ್ರಮ ಉದ್ಘಾಟಿಸಲು ಮೈಸೂರಿಗೆ ಆಗಮಿಸಿದ್ದಾರೆ. ಯುವ ದಸರಾಗೂ ಮುನ್ನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ನಾಡ ಅಧಿದೇವತೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಾತನಾಡಿದ ಶಿವರಾಜ್‍ ಕುಮಾರ್, ದಸರಾ ಹಬ್ಬದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು ಬಹಳ ಸಂತಸ ತಂದಿದೆ. ತಂದೆಯ ಕಾಲದಿಂದಲೂ ದಸರಾ ಹಬ್ಬವನ್ನು ವೀಕ್ಷಿಸುತ್ತಾ ಬಂದಿದ್ದೇವೆ. ಯುವ ಜನರಿಗಾಗಿ ನಡೆಸುತ್ತಿರುವ ಯುವ ದಸರಾ ಉತ್ತಮ ಕಾರ್ಯಕ್ರಮ ಎಂದು ಹೇಳಿದ್ದಾರೆ.

 

Leave a Reply

comments

Related Articles

error: